ನವದೆಹಲಿ, ಅ.30 (DaijiworldNews/PY): "ಬಿಜೆಪಿ ಆಡಳಿತವಿರುವ ಉತ್ತರಪ್ರದೇಶದಲ್ಲಿ ವಿದ್ಯುತ್ ಬಿಲ್ಗಳ ಲೂಟಿಯಿಂದ ರಾಜ್ಯದ ಜನರು ತೀವ್ರ ತೊಂದರೆಗೀಡಾಗಿದ್ದಾರೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ದೂರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಬಿಜೆಪಿ ಆಡಳಿತವಿರುವ ಉತ್ತರಪ್ರದೇಶದಲ್ಲಿ ವಿದ್ಯುತ್ ಬಿಲ್ ಹಾಗೂ ಸ್ಮಾರ್ಟ್ ಮೀಟರ್ ಲೂಟಿಯಿಂದ ರಾಜ್ಯದ ಜನರು ತೀವ್ರ ತೊಂದರೆಗೀಡಾಗಿದ್ದಾರೆ. ಕಷ್ಟಪಟ್ಟು ದುಡಿಯುವ ಕುಟುಂಬಕ್ಕೆ 19 ಕೋಟಿ ರೂ. ಗೂ ಅಧಿಕ ವಿದ್ಯುತ್ ಶುಲ್ಕ ಪಾವತಿ ಮಾಡುವಂತೆ ನೋಟಿಸ್ ನೀಡಿದೆ" ಎಂದಿದ್ದಾರೆ.
"ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ವಿದ್ಯುತ್ ಬಿಲ್ ಲೂಟಿ ಕೊನೆಗೊಳ್ಳುತ್ತದೆ" ಎಂದು ತಿಳಿಸಿದ್ದಾರೆ.
ಕಾರ್ಮಿಕನೋರ್ವನಿಗೆ 19 ಕೋಟಿ ರೂ. ಗೂ ಅಧಿಕ ವಿದ್ಯುತ್ ಶುಲ್ಕ ಪಾವತಿಸುವಂತೆ ನೋಟಿಸ್ ನೀಡಿರುವ ಬಗ್ಗೆ ಮಾಧ್ಯಮ ವರದಿಯೊಂದನ್ನು ಟ್ವೀಟ್ನಲ್ಲಿ ಟ್ಯಾಗ್ ಮಾಡಿದ್ದಾರೆ.