ಚೆನ್ನೈ, ಅ. 30(DaijiworldNews/HR): ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆ(ನೀಟ್) ಫಲಿತಾಂಶದ ಬಗ್ಗೆ ಆತಂಕಗೊಂಡ ವೈದ್ಯಕೀಯ ಆಕಾಂಕ್ಷಿ ಕೊಯಂಮತ್ತೂರು ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ
ಕೊಯಂಮತ್ತೂರಿನ ಸಂಗರಾಯಪುರಂನ ಕೆ.ಕೀರ್ತಿವಾಸನ್(20)ಅವರು ಸೆಪ್ಟೆಂಬರ್ನಲ್ಲಿ ಮೂರನೇ ಬಾರಿಗೆ ನಡೆದ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದು,ಒಂದೆರಡು ದಿನಗಳಲ್ಲಿ ಫಲಿತಾಂಶ ಬರುವ ನಿರೀಕ್ಷೆಯಿದೆ.
ಕೀರ್ತಿವಾಸನ್ 2019 ಹಾಗೂ 2020 ರಲ್ಲಿ ಪರೀಕ್ಷೆಯನ್ನು ತೆಗೆದುಕೊಂಡಿದ್ದ. ಆದರೆ ಪರೀಕ್ಷೆಯಲ್ಲಿ ಉತ್ತೀರ್ಣಗಾಗಲು ಸಾಧ್ಯವಾಗಲಿಲ್ಲ. ಹೀಗಾಗಿ ಈ ವರ್ಷ ಮೂರನೇ ಬಾರಿ ಅದೃಷ್ಟ ಪರೀಕ್ಷೆ ಬರೆದಿದ್ದು, ಈ ವರ್ಷವೂ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗದಿರಬಹುದು ಎಂದು ತನ್ನ ಪೋಷಕರಿಗೆ ತಿಳಿಸಿದ್ದಾರೆ ಎಂದು ಅವರು ಹೇಳಿದರು.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821