ಜಮ್ಮು, ಅ. 30(DaijiworldNews/HR): ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಮುಂಭಾಗದ ಪೋಸ್ಟ್ನ ಬಳಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಓರ್ವ ಸೇನಾ ಅಧಿಕಾರಿ ಮತ್ತು ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ರಜೌರಿ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ ನಿತ್ಯದಂತೆ ಗಸ್ತು ತಿರುಗುವ ಸಮಯದಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ನಿಖರ ಸ್ವರೂಪ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಹತ್ತಿರದ ಮಿಲಿಟರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ ಬದುಕಿಸಲು ಸಾಧ್ಯವಾಗಲಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.