ಬೆಂಗಳೂರು, ಅ.31 (DaijiworldNews/HR): ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು, ಇಂದು ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದ್ದು, ಇಂದಿನಿಂದ ನವೆಂಬರ್ 2ರವರೆಗೆ ಕಂಠೀರವ ಸ್ಟುಡಿಯೋಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಪುನೀತ್ ರಾಜ್ ಕುಮಾರ್ ಅವರ ವಿವಿಧ ಕಾರ್ಯಗಳ ಹಿನ್ನಲೆಯಲ್ಲಿ, ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಗಣ್ಯರು ಆಗಮಿಸುವ ಕಾರಣದಿಂದಾಗಿ ಇಂದಿನಿಂದ ನವೆಂಬರ್ 2ರವರೆಗೆ ಕಂಠೀರವ ಸ್ಟುಡಿಯೋಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಇಂದು ಮುಂಜಾನೆಯೇ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ನಗರದ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.