ಉತ್ತರಾಖಂಡ, ಅ.31 (DaijiworldNews/HR): ರಾಜ್ಯದ ಡೆಹ್ರಾಡೂನ್ ಜಿಲ್ಲೆಯ ಚಕ್ರತಾ ತಹಸಿಲ್ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಗಂಭೀರ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸ್ಥಳಕ್ಕೆ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧಿಕಾರಿಗಳ ಜೊತೆ ಧಾವಿಸಿದ್ದು ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.