ಮಂಡ್ಯ, ಅ.31 (DaijiworldNews/HR): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನ ಸುದ್ದಿ ಆಘಾತಕ್ಕೆ ಮತ್ತೊಬ್ಬ ಅಭಿಮಾನಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದಿದೆ.
ಕೆರೆಗೋಡು ಗ್ರಾಮದ ಕೆ.ಎಂ. ರಾಜೇಶ್ (50) ಮೃತಪಟ್ಟ ಅಅಭಿಮಾನಿ.
ಇನ್ನು ನಿನ್ನೆ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ನೋಡಿದ ಮತ್ತೊಬ್ಬ ಅಭಿಮಾನಿ ಗಣೇಶ್ ಬ್ಲೇಡ್ನಿಂದ ಕೈ, ಎದೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬಳಿಕ ಇವರನ್ನು ಸ್ನೇಹಿತರು ಯಳಂದೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇನ್ನು ಹನೂರು ತಾಲೂಕಿನ ಮರೂರು ಗ್ರಾಮದ ಮುನಿಯಪ್ಪ ಎಂಬ 30 ವರ್ಷದ ಯುವಕ ಪುನೀತ್ ರಾಜ್ಕುಮಾರ್ ಅವರ ಸಾವಿನ ಸುದ್ದಿ ತಿಳಿದು ಆಘಾತದಿಂದ ಸಾವನ್ನಪ್ಪಿದ್ದಾರೆ. ಮುನಿಯಪ್ಪ ಪುನೀತ್ ಅವರರ ಅಪ್ಪಟ ಅಭಿಮಾನಿಯಾಗಿದ್ದು, ಅವರ ಎಲ್ಲಾ ಸಿನಿಮಾಗಳನ್ನು ತಪ್ಪದೇ ನೋಡುತ್ತಿದ್ದರು.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ರಾಹುಲ್ ಗಾಡಿವಡ್ಡರ ಎಂಬ ಯುವಕ ಪುನೀತ್ ಅವರ ನಿಧನದ ಸುದ್ದಿ ಕೇಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.