ಬೆಂಗಳೂರು, ಅ.31 (DaijiworldNews/PY): "ಕೋವಿಡ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಭ್ರಷ್ಟಾಚಾರ, ಜನಪರ ಯೋಜನೆಗಳ ಅನುಷ್ಠಾನದಲ್ಲಿ ವೈಫಲ್ಯ, ಆಡಳಿತ ನಿರ್ವಹಣೆಯಲ್ಲಿ ಕಳಪೆ ಸಾಧನೆ, ಆಪರೇಷನ್ ಕಮಲದ ಅನೈತಿಕ ಸರ್ಕಾರದ ಆಡಳಿತದಲ್ಲಿ ರಾಜ್ಯ ಅಧೋಗತಿಗೆ!" ಎಂದು ಕಾಂಗ್ರೆಸ್ ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, "ಸಾರ್ವಜನಿಕ ಆಡಳಿತ ಸೂಚ್ಯಂಕದಲ್ಲಿ ಕರ್ನಾಟಕ 7ನೇ ಸ್ಥಾನಕ್ಕೆ ಕುಸಿದಿರುವುದು ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಕನ್ನಡಿ ಹಿಡಿದಿದೆ. ಕೋವಿಡ್ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಭ್ರಷ್ಟಾಚಾರ, ಜನಪರ ಯೋಜನೆಗಳ ಅನುಷ್ಠಾನದಲ್ಲಿ ವೈಫಲ್ಯ, ಆಡಳಿತ ನಿರ್ವಹಣೆಯಲ್ಲಿ ಕಳಪೆ ಸಾಧನೆ, ಆಪರೇಷನ್ ಕಮಲದ ಅನೈತಿಕ ಸರ್ಕಾರದ ಆಡಳಿತದಲ್ಲಿ ರಾಜ್ಯ ಅಧೋಗತಿಗೆ!" ಎಂದು ಹೇಳಿದೆ.
"ದೇಶದಲ್ಲಿ ಕೃಷಿ ಕಾರ್ಮಿಕರು, ರೈತರ ಆತ್ಮಹತ್ಯೆ 18% ಹೆಚ್ಚಿದ್ದು, ಕರ್ನಾಟಕ 2ನೇ ಸ್ಥಾನದಲ್ಲಿರುವುದೇ ಡಬಲ್ ಇಂಜಿನ್ ಸರ್ಕಾರದ ಸಾಧನೆ! ಆದಾಯ ಡಬಲ್ ಮಾಡುತ್ತೇವೆ ಎಂದವರು ಅನ್ನದಾತರ ಆತ್ಮಹತ್ಯೆಯನ್ನ ದ್ವಿಗುಣಗೊಳಿಸಿದ್ದಾರೆ! ರೈತಾಪಿ ವರ್ಗದ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾದ ಬಿಜೆಪಿ ಅವರನ್ನು ಹತಾಶರನ್ನಾಗಿಸಿ ಸಾವಿನ ದವಡೆಗೆ ನೂಕಿದೆ" ಎಂದಿದೆ.