ನವದೆಹಲಿ, ಅ.31 (DaijiworldNews/PY): "ಪ್ರಧಾನಿ ನರೇಂದ್ರ ಮೋದಿ ಅವರು, ಕೊರೊನಾ ಲಸಿಕೆಯ ಬೇಡಿಕೆ ಕಡಿಮೆ ಇರುವ 40 ಜಿಲ್ಲೆಗಳ ಜಿಲ್ಲಾಧಿಕಾಗಳ ಜೊತೆ ನ.3ರಂದು ಪರಿಶೀಲನಾ ಸಭೆ ನಡೆಸಲಿದ್ದಾರೆ" ಎಂದು ಪ್ರಧಾನಿ ಕಚೇರಿ ಭಾನುವಾರ ತಿಳಿಸಿದೆ.
ಕೊರೊನಾ ಲಸಿಕೆಯ ಮೊದಲ ಡೋಸ್ ನೀಡಿಕೆಯ ಪ್ರಮಾಣ ಶೇ.50ಕ್ಕಿಂತ ಕಡಿಮೆ ಇರುವ ಹಾಗೂ ಲಸಿಕೆಯ ಎರಡನೇ ಡೋಸ್ ಕಡಿಮೆ ಪ್ರಮಾಣದಲ್ಲಿ ನೀಡಿರುವ ಜಿಲ್ಲೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಭೆಯಲ್ಲಿ ಅರುಣಾಚರ ಪ್ರದೇಶ ಸೇರಿದಂತೆ ಜಾರ್ಖಂಡ್, ನಾಗಾಲ್ಯಾಂಡ್, ಮಹಾರಾಷ್ಟ್ರ, ಮಣಿಪುರ ಹಾಗೂ ಮೇಘಾಲಯದಲ್ಲಿನ 40 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಆ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿಯಾಗಲಿದ್ದಾರೆ.
"ಪ್ರಧಾನಿ ನರೇಂದ್ರ ಮೋದಿ ಅವರು ಜಿ20 ಶೃಂಗಸಭೆ ಹಾಗೂ ಸಿಪಿಒ 26 ಸಭೆಯಲ್ಲಿ ಪಾಲ್ಗೊಂಡು ವಿದೇಶದಿಂದ ಹಿಂತಿರುಗಿದ ಕೂಡಲೇ ಈ ಸಭೆಯಲ್ಲಿ ನಡೆಸಲಿದ್ದಾರೆ" ಎಂದು ಪ್ರಧಾನಿ ಕಚೇರಿ ಹೇಳಿದೆ.