ಬೆಂಗಳೂರು, ಅ.31 (DaijiworldNews/HR): ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಲ್ಲೂ ಸಾರ್ಥಕತೆ ಮೆರೆದಿದ್ದು, ತನ್ನ ಎರಡೂ ಕಣ್ಣುಗಳನ್ನು ದಾನ ಮಾಡಿದ್ದಾರೆ.
ಡಾ.ರಾಜ್ ಕುಮಾರ್ ಅವರ ಹಾದಿಯಲ್ಲೇ ಸಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನೇತ್ರದಾನ ಮಾಡಿ ಇಬ್ಬರ ಬಾಳಿಗೆ ಬೆಳಕಾಗಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸಲಾಗಿದೆ.
ಪುನೀತ್ ಅವರ ಕಣ್ಣುಗಳನ್ನು ಇಬ್ಬರಿಗೆ ಅಳವಡಿಸುವ ಮೂಲಕ ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ನಿನ್ನೆ ನಾರಾಯಣ ನೇತ್ರಾಲಯದ ವೈದರು ಪುನೀತ್ ಅವರ ಒಂದು ಕಣ್ಣನ್ನು ಒಬ್ಬರಿಗೆ ಅಳವಡಿಸಿದ್ದರು, ಇಂದು ಮತ್ತೊಬ್ಬರಿಗೆ ಒಂದು ಕಣ್ಣನ್ನು ಅಳವಡಿಸುವ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ ನೆರವೇರಿಸಿದ್ದಾರೆ.
ಇನ್ನು ಈ ಬಗ್ಗೆ ನಾರಾಯಣ ನೇತ್ರಾಲಯದ ವೈದ್ಯರು ನವೆಂಬರ್ 2ರಂದು ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದು ವರದಿಯಾಗಿದೆ.