ನವದೆಹಲಿ,ಅ.31 (DaijiworldNews/HR): ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮನಮೋಹನ್ ಸಿಂಗ್ ಅವರು ಅಕ್ಟೋಬರ್ ತಿಂಗಳ ಆರಂಭದಲ್ಲಿ ದೆಹಲಿಯ ಏಮ್ಸ್ ಗೆ ದಾಖಲಾಗಿದ್ದು, ಇದೀಗ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಈ ಮೊದಲು ಮನಮೋಹನ್ ಸಿಂಗ್ ಅವರಿಗೆ ಕೊರೋನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿ, ಗುಣಮುಖರಾಗಿದ್ದರು. ಆ ಬಳಿಕ ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ, ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.