ಬೆಂಗಳೂರು, ನ.01 (DaijiworldNews/PY): "ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸ್ಪರ್ಧಿಸಲಿದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "2023ರ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸ್ಪರ್ಧಿಸಲಿದೆ" ಎಂದಿದ್ದಾರೆ.
"ನಾವು ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿಎಸ್ವೈ ಅವರ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆಗೆ ಹೋಗುತ್ತೇವೆ" ಎಂದು ಹೇಳಿದ್ದಾರೆ.
66ನೇ ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿರುವ ನಳಿನ್, "ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ಉಳಿಸೋಣ, ಕನ್ನಡ ಬೆಳೆಸೋಣ - ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ! ಜೈ ಭುವನೇಶ್ವರಿ !" ಎಂದು ತಿಳಿಸಿದ್ದಾರೆ.