ಬೆಂಗಳೂರು, ನ.01(DaijiworldNews/HR): ಸೆಪ್ಟೆಂಬರ್ 5, 2017ರಂದು ನಡೆದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಮಂದಿಯ ವಿರುದ್ಧ ಬೆಂಗಳೂರಿನ ವಿಶೇಷ ನ್ಯಾಯಾಲಯ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ತಿಳಿದು ಬಂದಿದೆ.
ಆರೋಪಿಗಳನ್ನು ಅಮೋಲ್ ಕಾಳೆ, ಅಮಿತ್ ಬದ್ದಿ, ಪರಶುರಾಮ್ ವಾಗ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ದೆಗ್ವೇಕರ್, ಭರತ್ ಕುರಾಣೆ, ರಾಜೇಶ್ ಡಿ ಬಂಗೇರ, ಸುಧನ್ವ ಗೊಂದಲೇಕರ್, ಮೋಹನ್ ನಾಯಕ್ ಎನ್, ಸುರೇಶ್ ಎಚ್ ಎಲ್, ಶರದ್ ಬಿ ಕಲಾಸ್ಕರ್, ವಾಸುದೇವ್ ಬಿ ಸೂರ್ಯವಂಶಿ, ಸುಜಿತ್ ಕುಮಾರ್, ಮನೋಹರ್ ಯಡವೆ, ಶ್ರೀಕಾಂತ್ ಜೆ ಪಂಗರ್ಕರ್, ಕೆಟಿ ನವೀನ್ ಕುಮಾರ್ ಮತ್ತು ಋಷಿಕೇಶ್ ದೇವಡೇಕರ್ ಎಂದು ಗುರುತಿಸಲಾಗಿದೆ.
ಇನ್ನು ಈ ಎಲ್ಲಾ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆಯ ಹಲವು ಸೆಕ್ಷನ್ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.
ಸೆಪ್ಟೆಂಬರ್ 22, 2021 ರಂದು, ವಿಶೇಷ ನ್ಯಾಯಾಲಯವು ತುಮಕೂರು, ಬಳ್ಳಾರಿ, ಮೈಸೂರು ಮತ್ತು ಶಿವಮೊಗ್ಗದ ಜೈಲುಗಳಲ್ಲಿರುವ ಆರೋಪಿಗಳನ್ನು ಆರೋಪಗಳನ್ನು ರೂಪಿಸುವ ಉದ್ದೇಶದಿಂದ ಬೆಂಗಳೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಸೂಚಿಸಿತ್ತು.