ಬೆಂಗಳೂರು, ನ.01 (DaijiworldNews/PY): ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ನೀಡಬೇಕು ಎನ್ನುವ ಬೇಡಿಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, "ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಗೌರವ ನೀಡುವ ಬಗ್ಗೆ ಪ್ರಮುಖರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಹೇಳಿದ್ದಾರೆ.
"ಪುನೀತ್ ಅವರಿಗೆ ಕರ್ನಾಟಕ ರತ್ನ ಗೌರವ ನೀಡಬೇಕು ಎಂದಿ ಅಭಿಮಾನಿಗಳು ಒತ್ತಾಯ ಹೆಚ್ಚುತ್ತಿದೆ. ಈ ಬೇಡಿಕೆಯ ಬಗ್ಗೆ ತಕ್ಷಣವೇ ಏನನ್ನೂ ಹೇಳಲಾಗುವುದಿಲ್ಲ. ಈ ಬಗ್ಗೆ ಪ್ರಮುಖರೊಂದಿಗೆ ಚರ್ಚೆ ನಡೆಸುತ್ತೇನೆ" ಎಂದಿದ್ದಾರೆ.
"ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಖಚಿತ" ಎಂದು ತಿಳಿಸಿದ್ದಾರೆ.
"2022ರ ಜನವರಿ 22ರಿಂದ ಮನೆ ಮನೆಗೆ ಪಡಿತರ ವಿತರಣೆ ಮಾಡಲಾಗುವುದು. ವಾಹನಗಳ ಮುಖೇನ ಪಡಿತರ ಚೀಟಿದಾರರ ಮನೆಗಳಿಗೆ ರೇಷನ್ ವಿತರಣೆಗೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ನಿಗದಿತ ಸಮಯದಲ್ಲಿ ಪಡಿತರ ವಿತರಿಸಲಾಗುವುದು" ಎಂದು ಹೇಳಿದ್ದಾರೆ.