ಲಕ್ನೋ, ನ.01 (DaijiworldNews/PY): "ಮಹಿಳೆಯರಿಗಾಗಿ ಕಾಂಗ್ರೆಸ್ ಪಕ್ಷ ಪ್ರತ್ಯೇಕ ಚುನಾವಣಾ ಪ್ರಣಾಳಿಕೆಯನ್ನು ಸಿದ್ಧಪಡಿಸಲಿದೆ" ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶದ ನನ್ನ ಪ್ರೀತಿಯ ಸಹೋದರಿಯರೇ, "ನಿಮ್ಮ ಪ್ರತಿ ದಿನದ ಜೀವನ ಹೋರಾಗಳಿಂದ ತುಂಬಿದೆ. ಅದನ್ನು ಅರ್ಥ ಮಾಡಿಕೊಂಡ ಕಾಂಗ್ರೆಸ್ ಪಕ್ಷ ನಿಮಗಾಗಿ ಪ್ರತ್ಯೇಕ ಮಹಿಳಾ ಪ್ರಣಾಳಿಕೆಯನ್ನು ಸಿದ್ಧಪಡಿಸುತ್ತಿದೆ" ಎಂದು ತಿಳಿಸಿದ್ದಾರೆ.
"ಕಾಂಗ್ರೆಸ್ ಪಕ್ಷದ ಸರ್ಕಾರ ರಚನೆಯಾದ ನಂತರ, ಮಹಿಳೆಯರಿಗೆ ವಾರ್ಷಿಕವಾಗಿ ಮೂರು ಎಲ್ಪಿಜಿ ಸಿಲಿಂಡರ್ಗಳನ್ನು ಉಚಿತವಾಗಿ ನೀಡಲಾಗುವುದು. ರಾಜ್ಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ" ಎಂದಿದ್ದಾರೆ.
ಇದರೊಂದಿಗೆ ಮಹಿಳೆಯರಿಗೆ ನೀಡುವ ಭರವಸೆಯ ಪಟ್ಟಿಯನ್ನು ಲಗತ್ತಿಸಿದ್ದಾರೆ.