ಕೊಪ್ಪಳ, ನ.01(DaijiworldNews/HR): ಕರ್ನಾಟಕದಲ್ಲಿ ಶಾಲೆಗಳು ಆರಂಭವಾದ ಬೆನ್ನಲ್ಲೇ ಇದೀಗ ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳು ಆರಂಭವಾಗಲಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 8 ರಿಂದ ರಾಜ್ಯದಲ್ಲಿ ಅಂಗನವಾಡಿಗಳು ಆರಂಭವಾಗಲಿದ್ದು, ಅಂಗನವಾಡಿಗಳ ಆರಂಭಕ್ಕೆ ಸ್ವಚ್ಛತೆ, ಸ್ಯಾನಿಟೈಸರ್ ಮಾಡಲಾಗುವುದು ಎಂದಿದ್ದಾರೆ.
ಇನ್ನು ಹಾನಗಲ್, ಸಿಂದಗಿ ಉಪಚುನಾವಣೆಯ ಕುರಿತು ಮಾತನಾಡಿದ ಅವರು, "ರಾಜ್ಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಹಾನಗಲ್, ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.