ಉತ್ತರಪ್ರದೇಶ, ನ 01 (DaijiworldNews/MS): ಮುಂದಿನ ವರ್ಷದ ಪ್ರಾರಂಭದಲ್ಲಿ ನಡೆಯಲಿರುವ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಾವು ಸ್ಪರ್ಧಿಸೋದಿಲ್ಲ ಎಂಬುದಾಗಿ ಘೋಷಣೆ ಮಾಡಿದ್ದಾರೆ.
ಜಂಗಢದಿಂದ ಸಮಾಜವಾದಿ ಪಕ್ಷದ ಸಂಸದರು ಹಾಗೂ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯೂ ಆಗಿರುವ ಅಖಿಲೇಶ್ ಯಾದವ್, ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ರಾಷ್ಟ್ರೀಯ ಲೋಕದಳ (ಆರ್ ಎಲ್ ಡಿ) ಜೊತೆಗಿನ ಮೈತ್ರಿ ಅಂತಿಮವಾಗಿದೆ.ಸೀಟು ಹಂಚಿಕೆ ಬಗ್ಗೆ ತೀರ್ಮಾನವಾಗಬೇಕಿದೆ ಎಂದು ಎಸ್ ಪಿ ಮುಖ್ಯಸ್ಥರು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.
ಚಿಕ್ಕಪ್ಪ ಶಿವಪಾಲ್ ಯಾದವ್ ಅವರ ಪ್ರಗತಿಶೀಲ ಸಮಾಜವಾದಿ ಪಕ್ಷ ಲೋಹಿಯಾ (ಪಿಎಸ್ಪಿಎಲ್) ದಿಂದ ನೆರವು ಕುರಿತಂತೆ ಪ್ರತಿಕ್ರಿಯಿಸಿದ ಅಖಿಲೇಶ್ ಯಾದವ್, ಇದರಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ, ಅವರಿಗೆ ಹಾಗೂ ಅವರ ಕಡೆಯವರಿಗೆ ಸರಿಯಾದ ಗೌರವವನ್ನು ನೀಡಲಾಗುವುದು ಎಂದು ಹೇಳಿದರು.