ಶಿವಮೊಗ್ಗ, ನ.01 (DaijiworldNews/PY): "ರಾಜ್ಯ ಸರ್ಕಾರ ಬಿಟ್ ಕಾಯಿನ್ ವಿಚಾರದಲ್ಲಿ ಕಠಿಣ ನಿಲುವು ಹೊಂದಿದೆ" ಎಂದು ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಬಿಟ್ ಕಾಯಿನ್ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ನಿಲುವು ಹೊಂದಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಗೃಹ ಇಲಾಖೆ ಡ್ರಗ್ಸ್ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಯ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಕುರಿತು ತಿಳಿಸಿದ್ದಾರೆ. ತಪ್ಪಿತಸ್ಥರು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಕಾನೂನು ಕ್ರಮ ಕೈಗೊಳ್ಳುತ್ತದೆ" ಎಂದಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿ ಕವರ್ ನೀಡಿದೆ ಎನ್ನುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, "ನಾವು ಉಪಚುನಾವಣೆಯಲ್ಲಿ ಕವರ್ ಹಂಚಿದ್ದೇವೆ ಎಂದರೆ ನೇರವಾಗಿ ಹಂಚಿದ್ದೇವೆ ಎಂದು ಅರ್ಥವೇ?. ನಾವು ಚುನಾವಣೆಯಲ್ಲಿ ಎಲ್ಲಾ ರೀತಿಯಾದ ತಂತ್ರಗಾರಿಕೆಯನ್ನು ಮಾಡಿದ್ದೇವೆ. ನಾವು ಅಭಿವೃದ್ಧಿ ಕಾರ್ಯ, ಸಂಘಟನೆ ಹಾಗೂ ಪ್ರಧಾನಿ ಮೋದಿ ನಾಯಕತ್ವದ ಆಧಾರದ ಮೇಲೆ ಗೆಲ್ಲುತ್ತೇವೆ. ಬಿಜೆಪಿಗೆ ಎರಡು ಕ್ಷೇತ್ರದಲ್ಲಿ ಗೆಲುವು ನಿಶ್ಚಿತ" ಎಂದು ಹೇಳಿದ್ದಾರೆ.
ಪೆಟ್ರೋಲ್, ಡೀಸೆಲ್ ಏರಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು, "ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಕುರಿತು ತೀರ್ಮಾನ ಮಾಡಬೇಕು. ತೈಲದ ಮೇಲಿನ ಸೆಸ್ ಇಳಿಕೆ ಮಾಡಬೇಕಾಗುತ್ತದೆ. ಈ ಕುರಿತು ನ.8ರಂದು ನಡೆಯುವ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ" ಎಂದಿದ್ದಾರೆ.