ಮುಂಬೈ, ನ.01(DaijiworldNews/HR): ಆರ್ಯನ್ ಖಾನ್ ಅವರಿಗೆ ಆಚಿತ್ ಕುಮಾರ್ ಅವರು ಡ್ರಗ್ಸ್ ಪೂರೈಕೆ ಮಾಡಿದ್ದಾರೆ ಎಂಬುದನ್ನು ಕೇವಲ ವಾಟ್ಸಾಪ್ ಮಾತುಕತೆಗಳ ಆಧಾರದಲ್ಲಿ ಹೇಳಲು ಆಗುವುದಿಲ್ಲ ಎಂದು ಮುಂಬೈ ವಿಶೇಷ ನ್ಯಾಯಾಲಯ ಹೇಳಿದೆ.
ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣದಲ್ಲಿ ಕೇವಲ ವಾಟ್ಸಾಪ್ ಮಾತುಕತೆಗಳು ಮಾತ್ರ ಪ್ರಮುಖ ಆರೋಪಿಗಳಾದ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚೆಂಟ್ ಅವರಿಗೆ ಆರೋಪಿ ಆಚಿತ್ ಕುಮಾರ್ ಡ್ರಗ್ಸ್ ಪೂರೈಕೆ ಮಾಡಿದ್ದ ಎಂಬುದಕ್ಕೆ ಸಾಕ್ಷಿಯಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಇನ್ನು ಅರ್ಜಿದಾರ ಆರೋಪಿಗಳಿಗೆ ಅಥವಾ ಇತರರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಎಂಬುದಕ್ಕೆ ದಾಖಲೆಗಳಲ್ಲಿ ಯಾವುದೇ ಪುರಾವೆಗಳಿಲ್ಲ. ಆದ್ದರಿಂದ ಅವರು ಜಾಮೀನಿಗೆ ಅರ್ಹವಾಗಿದ್ದಾರೆ ಎಂದು ಹೇಳಿದೆ.
ಸಮುದ್ರದಲ್ಲಿ ಹಡಗಿನಲ್ಲಿ ರೇವ್ ಪಾರ್ಟಿ ಮಾಡುತ್ತಿದ್ದ ವೇಳೆ ಡ್ರಗ್ಸ್ ಪತ್ತೆಯಾಗಿ ಎನ್ ಸಿಬಿ ಅಧಿಕಾರಿಗಳಿಂದ ಕಳೆದ ಅಕ್ಟೋಬರ್ 2ರಂದು ತಡರಾತ್ರಿ ಬಂಧನಕ್ಕೊಳಗಾಗಿದ್ದ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಗೆ ಕೊನೆಗೂ ಜೈಲುವಾಸದಿಂದ ಬಿಡುಗೆಡೆ ಸಿಕ್ಕಿದೆ.