ಬೆಂಗಳೂರು, ನ.01(DaijiworldNews/HR): ಬಿಟ್ ಕಾಯಿನ್ ಹಗರಣದ ಆರೋಪಿ 5000 ಬಿಟ್ ಕಾಯಿನ್ ದೊಚಿದ್ದನೆಂದು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿದ್ದಾರೆಂದು ಪತ್ರಿಕೆಗಳು ವರದಿ ಮಾಡಿದ್ದು, ಕದ್ದ ಆ ಬಿಟ್ ಕಾಯಿನ್ ಎಲ್ಲಿದೆ? ಅದನ್ನು ಜಪ್ತಿ ಮಾಡಲಾಗಿದೆಯೇ? ಇಲ್ಲವೇ ಅವು ಇನ್ನೂ ಪತ್ತೆಯಾಗಿಲ್ಲವೇ? ಎಂದು ಸರ್ಕಾರವನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಟ್ವೀಟ್ ಮಡಿರುವ ಅವರು, ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಪತ್ರಿಕಾ ವರದಿಗಳನ್ನು ಗಮನಿಸಿದರೆ ರಾಜ್ಯ ಸರ್ಕಾರದ ನಡವಳಿಕೆ ಬಗ್ಗೆ ಹಲವಾರು ಪ್ರಶ್ನೆಗಳು ಹುಟ್ಟಿಕೊಳ್ಳುತ್ತವೆ.
ಮುಖ್ಯಮಂತ್ರಿಯವರು ಪ್ರಶ್ನಿಸಿದವರ ವಿರುದ್ದ ಆರೋಪ ಮಾಡಲು ಹೋಗದೆ ತನಿಖೆಯ ಪೂರ್ಣ ವಿವರವನ್ನು ಸಾರ್ವಜನಿಕರ ಮುಂದಿಡಬೇಕು" ಎಂದರು.
ಇನ್ನು ರಾಜ್ಯದ ತನಿಖಾ ಸಂಸ್ಥೆಗಳು ಸಮಗ್ರ ತನಿಖೆ ನಡೆಸಿದ್ದು ಸರ್ಕಾರವೇ ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ವಹಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದು, ಸಮಗ್ರ ತನಿಖೆ ನಡೆಸಿದ್ದರೆ ಹೆಚ್ಚಿನ ತನಿಖೆಗೆ ಇಡಿ ಮತ್ತು ಸಿಬಿಐಗೆ ಒಪ್ಪಿಸುವ ಅನಿವಾರ್ಯತೆ ಯಾಕೆ ಬಂತು? ಎಂದು ಪ್ರಶ್ನಿಸಿದ್ದಾರೆ.