ಬೆಂಗಳೂರು, ನ. 02 (DaijiworldNews/HR): ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನವಂಬರ್ 6ರವರೆಗೆ ಅಧಿಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾಂದರ್ಭಿಕ ಚಿತ್ರ
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 6ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 'ಯೆಲ್ಲೊ ಅಲರ್ಟ್ ಮುಂದುವರಿಸಲಾಗಿದೆ.
ಇನ್ನು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಾಳೆಯಿಂದ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನವಂಬರ್ 6ರಿಂದ ಮಳೆ ಹೆಚ್ಚಾಗಲಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ಸೋಮವಾರ 8 ಸೆಂ.ಮೀ ಗರಿಷ್ಠ ಮಳೆಯಾಗಿದೆ.