ನವದೆಹಲಿ,ನ. 02 (DaijiworldNews/HR): ವಾಟ್ಸಪ್ ಸಂಸ್ಥೆಯು 2021 ರ ಸೆಪ್ಟೆಂಬರ್ ತಿಂಗಳಲ್ಲಿ ಬರೋಬ್ಬರಿ 22 ಲಕ್ಷಕ್ಕೂ ಹೆಚ್ಚು ಭಾರತೀಯರ ವಾಟ್ಸಪ್ ಖಾತೆಗಳನ್ನು ನಿಷೇಧಿಸಿದೆ ಎಂದು ವಾಟ್ಸಪ್ ವರದಿ ತಿಳಿಸಿದೆ.
ಸಾಂದರ್ಭಿಕ ಚಿತ್ರ
ವಾಟ್ಸಪ್ ಸಂಸ್ಥೆಯು ಬಿಡುಗಡೆ ಮಾಡಿರುವ ವರದಿಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ 2,209,000 ಭಾರತೀಯರ ವಾಟ್ಸಪ್ ಖಾತೆಗಳನ್ನು ನಿಷೇಧಿಸಲಾಗಿದ್ದು, ಭಾರತೀಯರ ಖಾತೆಯನ್ನು +91 ಫೊನ್ ಸಂಖ್ಯೆಯ ಮೂಲಕ ಈ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ಹೇಳಿದೆ.
ಇನ್ನು ವಾಟ್ಸಪ್ ಬಳಕೆದಾರರನ್ನು ಸುರಕ್ಷಿತವಾಗಿಡಲು ಸುಮಾರು 22 ಲಕ್ಷಕ್ಕೂ ಹೆಚ್ಚು ಭಾರತೀಯರ ವಾಟ್ಸಪ್ ಖಾತೆಗಳನ್ನು ನಿಷೇಧದ ಕ್ರಮ ಕೈಗೊಳ್ಳಲಾಗಿದೆ ಎಂದು ವ್ಯಾಟ್ಸಪ್ ವಕ್ತಾರ ಮಾಹಿತಿ ನೀಡಿದ್ದಾರೆ.