ಸಿಂದಗಿ, ನ. 02 (DaijiworldNews/HR): ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.
ಅಕ್ಟೋಬರ್ 30ರಂದು ನಡೆದ ಉಪ ಚುನಾವಣೆಯ ಮತ ಎಣಿಕೆ ಇಂದು ನಡೆದಿದ್ದು, ಕೇಂದ್ರ ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆ ಬಾಕಿ ಇದೆ.
ಇನ್ನು ಬಿಜೆಪಿ ಅಭ್ಯರ್ಥಿ ರಮೇಶ್ ಅವರು 7,44,63 ಮತಗಳನ್ನು ಪಡೆಯುವ ಮೂಲಕ 10,747 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 49,897 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದಿದ್ದು, ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 3116 ಮತಗಳನ್ನು ಪಡೆದುಕೊಂಡಿದ್ದಾರೆ.