ಬೆಂಗಳೂರು, ನ 02 (DaijiworldNews/MS): ಉಪ ಚುನಾವಣೆ ಫಲಿತಾಂಶ ನೋಡಿದರೆ ಜೆಡಿಎಸ್ ಪಕ್ಷವನ್ನು ಅಲ್ಪಸಂಖ್ಯಾತರರು ನಂಬುವುದಿಲ್ಲ ಎನ್ನುವುದು ಸ್ಪಷ್ಟವಾಗಿ ತಿಳಿದುಬರುತ್ತದೆ ಎರಡೂ ಕಡೆಯೂ ಜೆಡಿಎಸ್ ಠೇವಣಿ ಕಳೆದುಕೊಂಡಿದೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಲೇವಡಿ ಮಾಡಿದ್ದಾರೆ.
ಉಪ ಚುನಾವಣೆ ಫಲಿತಾಂಶದ ವಿಚಾರವಾಗಿ ಪ್ರತಿಕ್ರಿಯಿಸಿ ಮಾತನಾಡಿದ ಅವರು, " ಹಾನಗಲ್ ನಲ್ಲಿ ಪಕ್ಷೇತರ ಅಭ್ಯರ್ಥಿಗಿಂತ ಕಡಿಮೆ ಮತ ಜೆಡಿಎಸ್ ಗೆ ಬಂದಿದೆ. ಕಾಂಗ್ರೆಸ್ ನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಆಗಿದ್ದ ಮುಖಂಡನನ್ನು ಕರೆದುಕೊಂಡು ಹೋಗಿ ನಿಲ್ಲಿಸಿ ಆತನ ರಾಜಕೀಯ ಜೀವನ ಹಾಳು ಮಾಡಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್ ಕಳೆದ ಚುನಾವಣೆಗಿಂತ 40 ಸಾವಿರ ಮತ ಹೆಚ್ಚು ಪಡೆದಿದೆ. ಜೆಡಿಎಸ್ ಅಲ್ಲೂ ಅಲ್ಪಸಂಖ್ಯಾತ ಮಹಿಳೆಯನ್ನು ಬಲಿಪಶು ಮಾಡಿದೆ" ಎಂದು ಆರೋಪಿಸಿದ್ದಾರೆ.
"ಜೆಡಿಎಸ್ ನಂಬಿದರೆ ಕಷ್ಟ ಎನ್ನುವುದು ಎಲ್ಲರಿಗೂ ಅರ್ಥವಾಗಿದೆ ಇದನ್ನು ಅಲ್ಪಸಂಖ್ಯಾತ ಸಮುದಾಯಯೂ ಚೆನ್ನಾಗಿ ಮನವರಿಕೆ ಮಾಡಿಕೊಳ್ಳಬೇಕು" ಎಂದು ಜಮೀರ್ ಹೇಳಿದ್ದಾರೆ.
"ಹಾನಗಲ್ ನಲ್ಲಿ ಕಾಂಗ್ರೆಸ್ ಪಕ್ಷವೂ ಒಗ್ಗಟ್ಟಿನಿಂದ ಕಣಕ್ಕೆ ಇಳಿದಿತ್ತು. ಸಿದ್ದರಾಮಯ್ಯ, ಡಿ. ಕೆ.ಶಿವಕುಮಾರ್ ಸೇರಿ ಪಕ್ಷದ ಎಲ್ಲಾ ನಾಯಕರೂ ಶ್ರಮ ಹಾಕಿದ್ದಾರೆ" ಎಂದು ಹೇಳಿದ್ದಾರೆ.