ಪಂಜಾಬ್, ನ. 02 (DaijiworldNews/HR): ಅಮರಿಂದರ್ ಸಿಂಗ್ ಅವರು ಪಂಜಾಬ್ ಮುಖ್ಯಮಂತ್ರಿ ಹುದ್ದೆಯನ್ನು ತ್ಯಜಿಸಿದ ಒಂದು ತಿಂಗಳ ಬಳಿಕ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಪಕ್ಷದ ಹೈಕಮಾಂಡ್ ನನ್ನನ್ನ ನಡೆಸಿಕೊಂಡ ರೀತಿಯಿಂದ ಅವಮಾನವಾಗಿದೆ' ಎಂದಿದ್ದಾರೆ.
ಇನ್ನು ತಮ್ಮ ರಾಜೀನಾಮೆ ಪತ್ರವನ್ನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಅಮರಿಂದರ್ ಸಿಂಗ್ 'ಪಂಜಾಬ್ ಲೋಕ ಕಾಂಗ್ರೆಸ್' ಎಂದು ತಮ್ಮ ಹೊಸ ಪಕ್ಷದ ಹೆಸರು ಘೋಷಿಸಿದ್ದಾರೆ.