ಮೈಸೂರು, ನ. 02 (DaijiworldNews/SM): ಸಿಂದಗಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ದಾಖಲಿಸಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಹಾನಗಲ್ನಲ್ಲಿ ಅನುಭವಿಸಿರುವ ಸೋಲನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮುಂದಿನ ದಿನಗಳಲ್ಲಿ ಸೋಲನ್ನೇ ಗೆಲುವಾಗಿಸಲಾಗುವುದು ಎಂದು ತಿಳಿಸಿದ್ದಾರೆ.
ಹಾನಗಲ್ನಲ್ಲಿ ನಮ್ಮ ನಿರೀಕ್ಷೆ ಮಟ್ಟಕ್ಕೆ ಮತಗಳು ದೊರೆತಿಲ್ಲ. ಸಿಎ ಉದಾಸಿಯವರಿಗೆ ಇದ್ದಂತಹ ಬೆಂಬಲವನ್ನು ಪಡೆಯಲು ನಮ್ಮಿಂದ ಸಾಧ್ಯವಿಲ್ಲ. ಉಪ ಚುನಾವಣೆ ಸಂದರ್ಭದಲ್ಲಿ ಪಕ್ಷದ ಹಿರಿಯರ್ಯ್, ನಾಯಕರು ಹಾಗೂ ಪದಾಧಿಕಾರಿಗಳು ಶ್ರಮಪಟ್ಟಿದ್ದಾರೆ. ಅವರನ್ನು ಸ್ಮರಿಸುತ್ತೇನೆ ಎಂದರು.