ಬೆಂಗಳೂರು, ನ 04 (DaijiworldNews/MS): ಕನ್ನಡಿಗರ ಕಣ್ಮಣಿ ಪುನೀತ್ ರಾಜಕುಮಾರ್ ಕಣ್ಮರೆಯಾಗಿ ಇಂದಿಗೆ ಆರು ದಿವಸ ಸಂದಿವೆ. ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ನಮನ ಸಲ್ಲಿಸುವ ಉದ್ದೇಶದಿಂದ ನವೆಂಬರ್ 16 ರಂದು `ಪುನೀತ್ ನಮನ' ಕಾರ್ಯಕ್ರಮವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ.
ಸ್ಯಾಂಡಲ್ ವುಡ್ ವತಿಯಿಂದ ನಮನ ಸಲ್ಲಿಸುವ ಉದ್ದೇಶದಿಂದ 'ಪುನೀತ್ ನಮನ' ಕಾರ್ಯಕ್ರಮವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಚಲನಚಿತ್ರ ವಾಣಿಜ್ಯ ಮಂಡಳಿ ಅದ್ಯಕ್ಷ ಜಯರಾಜ್ ಮಾಹಿತಿ ನೀಡಿದ್ದಾರೆ.
ನವೆಂಬರ್ 16ರಂದು ‘ಪುನೀತ್ ನಮನ’ ಕಾರ್ಯಕ್ರಮವು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಮಧ್ಯಾಹ್ನ 3 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಕರ್ನಾಟಕ ಸೇರಿದಂತೆ ಹಲವು ಚಿತ್ರೋದ್ಯಮದ ಗಣ್ಯರನ್ನ ಕರೆದು ಬೃಹತ್ ಕಾರ್ಯಕ್ರಮ ಮಾಡುವ ಯೋಜನೆ ಇದೆ.