ಬೆಂಗಳೂರು,ನ 04 (DaijiworldNews/MS): ಉಪ ಚುನಾವಣೆಯ ಫಲಿತಾಂಶದಿಂದ ನಾವು ಕುಗ್ಗಿಲ್ಲ, ನಾನು ಇನ್ನೂ ಬದುಕಿದ್ದೇನೆ, ಮುಂದಿನ 2023ರ ವಿಧಾನಸಭಾ ಚುನಾವಣೆಯ ಸಂದರ್ಭ ನಾನು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡು ಪಕ್ಷವನ್ನು ಮತ್ತಷ್ಟು ಸದೃಢಗೊಳಿಸುತ್ತೇನೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.
ಉಪ ಚುನಾವಣೆಯ ಫಲಿತಾಂಶ ಪ್ರಕಟವಾದ ಹಿನ್ನಲೆಯಲ್ಲಿ ಮಾತನಾಡಿದ ಅವರು, ಬಿಜೆಪಿ, ಕಾಂಗ್ರೆಸ್ ಪಕ್ಷ ಹಣದ ಹೊಳೆ ಹರಿಸಿದ್ದಾರೆ. ಈ ಚುನಾವಣೆಯ ಫಲಿತಾಂಶದಿಂದ ನಾನು ಧೃತಿಗೆಟ್ಟಿಲ್ಲ . ಉಪ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಸಾರ್ವತ್ರಿಕ ಚುನಾವಣೆಯಲ್ಲಿ ಯಾರೂ ಅಷ್ಟು ದುಡ್ಡು ಖರ್ಚು ಮಾಡೊಕಾಗಲ್ಲ ಅಷ್ಟು ಹಣದ ಹೊಳೆಯನ್ನೇ ಹರಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸಾರ್ವತ್ರಿಕ ಚುನಾವಣೆಗೆ ಇನ್ನೂ ಒಂದೂವರೆ ವರ್ಷ ಇದೆ. ರಾಜ್ಯ ಪ್ರವಾಸ ಮಾಡುತ್ತೇನೆ. ನಾನು ಜೆಡಿಎಸ್ ಸೊರಗಿರುವ ಕ್ಷೇತ್ರ ಪ್ರವಾಸ ಮಾಡುತ್ತೇನೆ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.