ನವದೆಹಲಿ, ನ 04 (DaijiworldNews/MS): ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತೀವ್ರ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದು, ದೀಪಾವಳಿ ವೇಳೆ ಹಣದುಬ್ಬರ ಗರಿಷ್ಠ ಮಟ್ಟದಲ್ಲಿದೆ ಎಂದು ಹೇಳಿದ್ದಾರೆ.
ಟ್ವಿಟರ್ನಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ ಹಿಂದಿಯಲ್ಲಿ ರುವ ಅವರು "ಇದು ದೀಪಾವಳಿ. ಹಣದುಬ್ಬರ ಉತ್ತುಂಗದಲ್ಲಿದೆ. ಆದರೆ ತಮಾಷೆಯಲ್ಲ. ಇದರೊಂದಿಗೆ ಮೋದಿ ಸರ್ಕಾರವು ಸಾರ್ವಜನಿಕರಿಗೆ ಸ್ಪಂದಿಸುವ ಸಂವೇದನಾಶೀಲ ಹೃದಯವನ್ನು ಹೊಂದಿರುತ್ತಿದ್ದರೆ ಚೆನ್ನಾಗಿರುತ್ತಿತ್ತು ಎಂದು ನನಾನು ಬಯಸುತ್ತೇನೆ." ಎಂದು ಬರೆದುಕೊಂಡಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯ ಹೆಸರಿನಲ್ಲಿ ಸರ್ಕಾರ ಜನತೆಯನ್ನು ಸುಲಿಗೆ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷ ಆರೋಪಿಸಿದೆ.