ಹುಬ್ಬಳ್ಳಿ, ನ.03 (DaijiworldNews/PY): "ಬರುವ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲೇ ನಡೆಸಲು ತೀರ್ಮಾನಿಸಲಾಗಿದೆ. ಆದರೆ, ಇನ್ನೂ ದಿನಾಂಕ ನಿಗದಿಯಾಗಿಲ್ಲ" ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನದ ನಡೆಸಲು ನವೆಂಬರ್ 8ರಂದು ಸಚಿವ ಸಂಪುಟದ ಸಭೆ ಇದೆ" ಎಂದಿದ್ದಾರೆ.
"ಭತ್ತ ಖರೀದಿ ಕೇಂದ್ರ ಆರಂಭಿಸಿ ಎನ್ನುವ ಬೇಡಿಕೆ ಇತ್ತು. ರಾಯಚೂರು, ಕೊಪ್ಪಳ ಭಾಗ ಸೇರಿದಂತೆ ರಾಜ್ಯದ ರೈತರು ಭತ್ತ ಖರೀದಿ ಕೇಂದ್ರ ಪ್ರಾರಂಭಿಸಿ ಎಂದು ಮನವಿ ಮಾಡಿದ್ದರು. ಈ ಹಿನ್ನೆಲೆ ಎಂಎಸ್ಪಿ ದರದಲ್ಲಿ ಖತ್ತ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಭತ್ತ ಖರೀದಿ ಪ್ರಕ್ರಿಯೆ ಪ್ರಾರಂಭ ಮಾಡಲು ತಿಳಿಸಲಾಗಿದೆ" ಎಂದು ತಿಳಿಸಿದ್ದಾರೆ.