ಚಾಮರಾಜನಗರ, ನ. 4 (DaijiworldNews/HR): ಸ್ಯಾಂಡಲ್ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಮೇಲಿನ ಅಭಿಮಾನದಿಂದ ವಿದ್ಯಾರ್ಥಿನಿಯೊಬ್ಬಳು ಕೈ ಕೊಯ್ದುಕೊಂಡು ರಕ್ತದಲ್ಲಿ ಐ ಲವ್ ಯು ಅಪ್ಪು ಎಂದು ಬರೆದ ಘಟನೆ ನಡೆದಿದೆ.
ಚಾಮರಾಜನಗರದ ನಿವಾಸಿಯಾಗಿರುವ ವಿದ್ಯಾರ್ಥಿನಿ ಮೈಸೂರಿನ ಹಾಸ್ಟೆಲ್ನಲ್ಲಿ ವಾಸವಾಗಿದ್ದಾಳೆ.
ಪುನೀತ್ ರಾಜಕುಮಾರ್ ನಿಧನದಿಂದ ಪದವಿ ಓದುತ್ತಿರುವ ವಿದ್ಯಾರ್ಥಿನಿ ಆಘಾತಕ್ಕೆ ಒಳಗಾಗಿದ್ದು, ಬ್ಲೇಡ್ ನಿಂದ ಕೈ ಕೊಯ್ದುಕೊಂಡು ರಕ್ತದಲ್ಲಿ ಬಿಳಿಹಾಳೆಯಲ್ಲಿ ಐ ಲವ್ ಯು ಅಪ್ಪು ಎಂದು ಬರೆದಿದ್ದಾಳೆ.
ಇನ್ನು ಬ್ಲೇಡ್ ನಿಂದ ಕೈ ಕೊಯ್ದುಕೊಂಡಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದು, ಸಹಪಾಠಿಗಳು ಆಸ್ಪತ್ರೆಗೆ ದಾಖಲಿಸಿದ್ದು, ಪೋಷಕರು ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.