ನವದೆಹಲಿ, ನ.04 (DaijiworldNews/PY): "ಕೇಂದ್ರ ಸರ್ಕಾರ ಘೋಷಣೆ ಮಾಡಿದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತ ಅಸಮರ್ಪಕವಾಗಿದೆ" ಎಂದು ರಾಷ್ಟ್ರೀಯ ಜನತಾ ದಳ ನಾಯಕ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
"ಕೇಂದ್ರ ಸರ್ಕಾರವು ಘೋಷಿಸಿದ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದ ಜರಿಗೆ ಯಾವುದೇ ರೀತಿಯಾದ ಪರಿಹಾರ ಸಿಗುವುದಿಲ್ಲ ಹಾಗೂ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಬಳಿಕ ಪೆಟ್ರೋಲ್ ದರವನ್ನು ಪುನಃ ಹೆಚ್ಚಳ ಮಾಡಲಾಗುವುದು" ಎಂದು ತಿಳಿಸಿದ್ದಾರೆ.
"ಪ್ರತಿ ಲೀಟರ್ಗೆ 50 ರೂ. ಕಡಿಮೆ ಮಾಡಿದ್ದರೆ ಅದು ಪರಿಹಾರವಾಗುತ್ತಿತ್ತು. ಉತ್ತರ ಪ್ರದೇಶ ಚುನಾವಣೆಯ ಬಳಿಕ ಪೆಟ್ರೋಲ್ ಬೆಲೆ ಮತ್ತೆ ಹೆಚ್ಚಿಸಲಾಗುವುದು" ಎಂದು ಹೇಳಿದ್ದಾರೆ.
"ಪೆಟ್ರೋಲ್ ಹಾಗೂ ಡೀಸೆಲ್ಗೆ ರಾಜ್ಯ ಸರ್ಕಾರಗಳು ಸ್ಥಳೀಯ ಮಟ್ಟದಲ್ಲಿ ಇರುವ ವ್ಯಾಟ್ ಇಳಿಕೆ ಮಾಡಬೇಕು. ಈ ಮುಖೇನ ಸಾರ್ವಜನಿಕರಿಗೆ ಉಂಟಾಗುವ ಹೊರೆ ತಗ್ಗಿಸಲು ಕ್ರಮ ತೆಗೆದುಕೊಳ್ಳಬೇಕು" ಎಂದಿದ್ದಾರೆ.