ರಾಯಚೂರು, ನ. 4 (DaijiworldNews/HR): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ ಬಗ್ಗೆ ನೀಡಿರುವ ಹೇಳಿಕೆ ವಿರೋಧಿಸಿ, ನಗರದಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಸಿದ್ದರಾಮಯ್ಯ ಪ್ರತಿಕೃತಿಗೆ ಬೆಂಕಿ ಹಚ್ಚುತ್ತಿದ್ದ ಸಂದರ್ಭದಲ್ಲಿ ತಡೆದ ಪೊಲೀಸ್ ಕಾನ್ಸ್ ಟೇಬಲ್ಗೆ ಬಿಜೆಪಿ ಮಾಜಿ ಶಾಸಕ ಕಪಾಳ ಮೋಕ್ಷ ಮಾಡಿದ್ದರು.
ಸಾಂದರ್ಭಿಕ ಚಿತ್ರ
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪಾಪಾರೆಡ್ಡಿ,ಬಿಜೆಪಿ ಮುಖಂಡರಾದ ಜೇಮ್ಸ್, ಹನುಮೇಶ್, ಶಿವು ಜಾಲಿಬೆಂಚಿ ಹಾಗೂ ಸಿದ್ಧನಗೌಡ ನೆಲಹಾಳು ಸೇರಿ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇನ್ನು ಪ್ರತಿಭಟನೆ ವೇಳೆ ಮಾಜಿ ಶಾಸಕ ಪಾಪಾರೆಡ್ಡಿಯವರು ಕರ್ತವ್ಯ ನಿರತ ಪೊಲೀಸ್ ಕಾನ್ಸ್ ಟೇಬಲ್ ಗೆ ಕಪಾಳ ಮೋಕ್ಷ ಮಾಡಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಪೊಲೀಸ್ ಇಲಾಖೆ, ಮಾಜಿ ಶಾಸಕ ಎ.ಪಾಪಾರೆಡ್ಡಿ ಸೇರಿದಂತೆ ಐವರ ವಿರುದ್ಧ ಐಪಿಸಿ ಸೆಕ್ಷನ್ 143, 147, 323, 504, 283, 353 ಸಹಿತ 149 ಕಲಂ ಅಡಿಯಲ್ಲಿ ದೂರು ದಾಖಲಿಸಲಾಗಿದೆ.