ಗದಗ, ನ.04 (DaijiworldNews/PY): ಮೂರು ತಿಂಗಳ ಕಂದಮ್ಮನನ್ನು ಹತ್ಯಗೈದು ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಲ್ಲಪ್ಪ ಗಡಾದ(30) ಸುಧಾ (24) ಹಾಗೂ ಮೂರು ತಿಂಗಳ ಮಗು ರೂಪಾಶ್ರೀ ಎಂದು ಗುರುತಿಸಲಾಗಿದೆ.
ಕೌಟುಂಬಿಕ ಕಲಹದ ಕಾರಣದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಅನುಮಾನ ವ್ಯಕ್ತವಾಗಿದೆ.
ಮನೆಯ ಹಾಲ್ನಲ್ಲ ಮಲ್ಲಪ್ಪ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಪತ್ನಿ ಸುಧಾ ಹಾಗೂ ಮಗುವಿನ ಮೃತದೇಹ ಬೆಡ್ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಗುವನ್ನು ಕೊಂದ ಬಳಿಕ ದಂಪತಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.