ನೌಶೇರಾ , ನ 04 (DaijiworldNews/MS): "ನಮ್ಮ ಸೈನಿಕರು 'ತಾಯಿ ಭಾರತಿಯ ' 'ಸುರಕ್ಷಾ ಕವಚ' ಆಗಿದ್ದಾರೆ. ಸೈನಿಕರ ಕಾರಣದಿಂದಾಗಿ ನಮ್ಮ ದೇಶದ ಜನರು ಶಾಂತಿಯುತವಾಗಿ ನಿದ್ರಿಸಲು ಮತ್ತು ಹಬ್ಬಗಳ ಸಮಯದಲ್ಲಿ ಸಂತೋಷವಾಗಿರಲು ಕಾರಣವಾಗಿದೆ" ಎಂದು ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಜೌರಿಯ ನೌಶೇರಾ ಸೆಕ್ಟರ್ನಲ್ಲಿ ಪ್ರಧಾನಿ ಹೇಳಿದರು.
ದೇಶದ ಗಡಿ ಕಾಯುವ ವೀರ ಯೋಧರೊಂದಿಗೆ ದೀಪಾವಳಿ ಆಚರಣೆ ಮಾಡುವ ಸಲುವಾಗಿ ಜಮ್ಮು ಮತ್ತು ಕಾಶ್ಮೀರದ ನೌಶೆರಾಗೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೇನಾಪಡೆಗಳನ್ನು ಕೊಂಡಾಡಿದರು.
ನಾನು ಪ್ರತಿ ದೀಪಾವಳಿಯನ್ನು ನಮ್ಮ ಗಡಿ ಕಾಯುವ ಸೈನಿಕರೊಂದಿಗೆ ಕಳೆದಿದ್ದೇನೆ. ಇಂದು ಇಲ್ಲಿ ನಮ್ಮ ಸೈನಿಕರಿಗಾಗಿ ಕೋಟ್ಯಂತರ ಭಾರತೀಯರ ಆಶೀರ್ವಾದವನ್ನು ನನ್ನೊಂದಿಗೆ ನಿಮಗಾಗಿ ತಂದಿದ್ದೇನೆ. ಇಂದು ನನ್ನ ಎದುರು ಕೆಚ್ಚೆದೆಯ ಸೋದರರು- ಸೋದರಿಯರಿದ್ದೀರಿ. ನಿಮ್ಮ ಮಾತೃಭೂಮಿಗಾಗಿ ನೀವೆಲ್ಲರೂ ಧೈರ್ಯದಿಂದ ಹೋರಾಡುತ್ತಿದ್ದೀರಿ. ನಮ್ಮ ತಾಯಾಡ್ನನ್ನು ಕಾಪಾಡಲೇಬೇಕೆಂಬ ಹಠ, ಬದ್ಧತೆ ನಿಮ್ಮ ಕಣ್ಣುಗಳಲ್ಲಿ ಕಾಣುತ್ತಿದೆ. ನಿಮ್ಮಿಂದಾಗಿಯೇ ನಾವಿಂದು ನಿಶ್ಚಿಂತೆಯಿಂದ ನಿದ್ರೆ ಮಾಡುತ್ತಿದ್ದೇವೆ, ದೇಶಾದ್ಯಂತ ಸಂಭ್ರಮದಿಂದ, ಯಾವುದೇ ಭಯವಿಲ್ಲದೆ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದೇವೆ ಎಂದು ಹೇಳಿದರು.
ಮ್ಮು-ಕಾಶ್ಮೀರದ ನೌಶೇರಾಗೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಯೋಧರ ಭೇಟಿಗೂ ಮುನ್ನ ಹುತಾತ್ಮ ಯೋಧರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.