ಲಕ್ನೋ, ನ. 4 (DaijiworldNews/HR): ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬೆನ್ನಲ್ಲೇ ಉತ್ತರಪ್ರದೇಶ ಸರ್ಕಾರ ಕೂಡಾ ಪೆಟ್ರೋಲ್, ಡೀಸೆಲ್ ಮೇಲಿನ ಬೆಲೆಯನ್ನು ಪ್ರತಿ ಲೀಟರ್ ಗೆ 12 ರೂಪಾಯಿ ಇಳಿಕೆ ಮಾಡಿರುವುದಾಗಿ ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಕೇಂದ್ರ ಸರ್ಕಾರ ಬುಧವಾರ ದೀಪಾವಳಿ ಕೊಡುಗೆಯಾಗಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಪೆಟ್ರೋಲ್ ಬೆಲೆ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಮೇಲೆ 10 ರೂ. ಅಬಕಾರಿ ಸುಂಕ ಕಡಿತಗೊಳಿಸಿ, ರಾಜ್ಯ ಸರ್ಕಾರಗಳು ಕೂಡಾ ವ್ಯಾಟ್ ಕಡಿತಗೊಳಿಸುವಂತೆ ಮನವಿ ಮಾಡಿತ್ತು.
ಇನ್ನು ಉತ್ತರಪ್ರದೇಶ ಸರ್ಕಾರ ಪೆಟ್ರೋಲ್ ಲೀಟರ್ ಗೆ 7 ರೂಪಾಯಿ ಹಾಗೂ ಡೀಸೆಲ್ ಗೆ 2 ರೂಪಾಯಿಯಷ್ಟು ವ್ಯಾಟ್ ಕಡಿತಗೊಳಿಸುವ ನಿರ್ಧಾರ ತೆಗೆದುಕೊಂಡಿದ್ದು, ಇದೀಗ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವ್ಯಾಟ್ ಕಡಿತದಿಂದಾಗಿ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿ ಲೀಟರ್ ಗೆ 12 ರೂಪಾಯಿ ಇಳಿಕೆಯಾದಂತಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನವನೀತ್ ಸೆಹಗಾಲ್ ಮಾಹಿತಿ ನೀಡಿದ್ದಾರೆ.