ಬೆಂಗಳೂರು, ನ 04 (DaijiworldNews/MS): ಇಂದು ಸಂಜೆಯಿಂದಲೇ ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ, ಸಿಎಂ ಬಸವರಾಜ ಬೊಮ್ಮಾಯಿ, "ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ್ದು, ರಾಜ್ಯದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 7 ರೂ. ಕಡಿಮೆ ಮಾಡಲು ನಿರ್ಧರಿಸಲಾಗಿದ್ದು, ಈ ಕುರಿತು ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿದ್ದೇನೆ. ಇಂದು ಸಂಜೆಯಿಂದಲೇ ಬೆಲೆ ಇಳಿಕೆಯಾಗಲಿದೆ ಎಂದು ಹೇಳಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ರಾಜ್ಯದ ಬೊಕ್ಕಸಕ್ಕೆ 2,100 ಕೋಟಿ ರೂ. ನಷ್ಟವಾಗಲಿದೆ. ಬೆಲೆ ಇಳಿಕೆ ಮಾಡುವ ಚಿಂತನೆ ಇತ್ತು. ಇದೀಗ ಕೇಂದ್ರ ಸರ್ಕಾರ ದೇಶದ ಜನರಿಗೆ ದೀಪಾವಳಿ ಉಡುಗೊರೆ ನೀಡಿರುವುದು ಖುಷಿ ತಂದಿದೆ ಎಂದರು.