ಬೆಂಗಳೂರು, ನ.04 (DaijiworldNews/PY): ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಜಿಎಸ್ಟಿ ಪರಿಹಾರವಾಗಿ 17,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಕೇಂದ್ರ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಮಾಡಿದೆ ಕರ್ನಾಟಕಕ್ಕೆ 1,602.61 ಕೋಟಿ ರೂ., ಮಹಾರಾಷ್ಟ್ರಕ್ಕೆ 3,053 ಕೋಟಿ ರೂ. ಬಿಡುಗಡೆ ಮಾಡಿದ್ದು, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಇನ್ನು ಗುಜರಾತ್, ಉತ್ತರಪ್ರದೇಶಕ್ಕೆ 1,400 ಕೋಟಿ ರೂ. ಹಾಗೂ ತಮಿಳುನಾಡಿಗೆ 1,314 ಕೋಟಿ ರೂ. ಬಿಡುಗಡೆ ಮಾಡಲಾಗಿದೆ.
ಈ ಬಗ್ಗೆ ಪ್ರಕಟಣೆಯಲ್ಲಿ ತಿಳಿಸಿರುವ ಕೇಂದ್ರ ಹಣಕಾಸು ಸಚಿವಾಲಯ, "ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 2021-22ನೇ ಸಾಲಿನಲ್ಲಿ ಈವರೆಗೆ ಒಟ್ಟು 60,000 ಕೋಟಿ ರೂ. ಜಿಎಸ್ಟಿ ಪರಿಹಾರ ಬಿಡುಗಡೆ ಮಾಡಲಾಗಿದೆ" ಎಂದು ಹೇಳಿದೆ.
"ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಹಣಕಾಸು ವರ್ಷದಲ್ಲಿ ಜಿಎಸ್ ಪರಿಹಾರದ ಕೊರತೆಯ ಬದಲಾಗಿ 1.59 ಲಕ್ಷ ಕೋಟಿ ರೂ.ಗಳ ಬ್ಯಾಕ್ ಟು ಬ್ಯಾಕ್ ಸಾಲವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ" ಎಂದು ಸಚಿವಾಲಯ ಮಾಹಿತಿ ನೀಡಿದೆ.