ದಾವಣಗೆರೆ, ನ. 4 (DaijiworldNews/HR): ಪಿಲ್ಲರ್ ಕುಸಿದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ.
ಸಾಂಧರ್ಭಿಕ ಚಿತ್ರ
ಜಿಲ್ಲೆಯ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಪಿಲ್ಲರ್ ಕುಸಿತಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿ ಆರು ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ.
ಇನ್ನು ಗಾಯಗೊಂಡಿರುವಂತ ಆರು ಕಾರ್ಮಿಕರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.