ಬೆಂಗಳೂರು, ನ.05 (DaijiworldNews/PY): "ಸಿಎಂ ಬಸವರಾಜ ಬೊಮ್ಮಾಯಿ ಅವರು ತವರು ಜಿಲ್ಲೆ ಹಾನಗಲ್ ಕ್ಷೇತ್ರದ ಮತದಾರರು 100 ದಿನಗಳ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಭರ್ಜರಿಯಾದ ಉಡುಗೊರೆ ನೀಡಿದ್ದಾರೆ" ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಟೀಕಿಸಿದ್ದಾರೆ.
pg
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮತದಾರನೇ ಸರ್ಕಾರಗಳ ಪಾಲಿಗೆ ಯಜಮಾನ ಎನ್ನುವುದನ್ನು ಎರಡು ಉಪಚುನಾವಣೆಗಳ ಫಲಿತಾಂಶವು ಸಾಬೀತುಪಡಿಸಿದೆ" ಎಂದಿದ್ದಾರೆ.
"ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಆಡಳಿತ 100 ದಿನಗಳನ್ನು ಪೂರೈಸಿದ ಹಿನ್ನೆಲೆ ಸಾಧನೆ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಅವರ ಸಾಧನೆಯನ್ನು ಕಂಡು ಅವರದೇ ಜಿಲ್ಲೆಯ ಜನ ಉಪಚುನಾವಣೆಯಲ್ಲಿ ತೀರ್ಪು ನೀಡಿದ್ದಾರೆ" ಎಂದು ಹೇಳಿದ್ದಾರೆ.
"ಉಪಚುನಾವಣೆಯ ಫಲಿತಾಂಶ ಬರುತ್ತಿದ್ದಂತೆ ಸರ್ಕಾರಗಳು ಹೆದರಿಕೊಂಡು ನೀತಿಗಳನ್ನು ಬದಲಾವಣೆ ಮಾಡಿಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಕಡಿತ ಮಾಡಿರುವುದೇ ಸಾಕ್ಷಿ" ಎಂದಿದ್ದಾರೆ.