ಬೆಂಗಳೂರು, ನ.06 (DaijiworldNews/HR): ಜಾಮೀನು ಪಡೆದು 2 ತಿಂಗಳ ಹಿಂದೆ ನಾಪತ್ತೆಯಾಗಿದ್ದ ಬಿಟ್ ಕಾಯಿನ್ ಪ್ರಕರಣದ ಪ್ರಮುಖ ಆರೋಗಿಯ ಶ್ರೀಕಿ ಆಲಿಯಾಸ್ ಶ್ರೀಕೃಷ್ಣನನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀಕಿ ಆಲಿಯಾಸ್ ಶ್ರೀಕೃಷ್ಣ ನಗರದ 5 ಸ್ಟಾರ್ ಹೊಟೇಲ್ ಒಂದರಲ್ಲಿ ತಂಗಿದ್ದು, ಹೋಟೆಲ್ ನಲ್ಲಿದ್ದ ವ್ಯಕ್ತಿಯೊಬ್ಬರ ಜೊತೆಗೆ ಕಿರಿಕ್ ಮಾಡಿಕೊಂಡಿದ್ದು, ಇಬ್ಬರ ನಡುವೆ ಜಗಳ ನಡೆದು ಹಲ್ಲೆ ಕೂಡ ನಡೆದಿತ್ತು.
ಇನ್ನು ಈ ಮಾಹಿತಿ ಪೊಲೀಸರಿಗೆ ತಲುಪಿದಾಗ ಸ್ಥಳಕ್ಕೆ ತೆರಳಿದಂತ ಪೊಲೀಸರಿಗೆ ಬಿಟ್ ಕಾಯಿನ್ ಆರೋಪಿ ಶ್ರೀಕಿ ಪತ್ತೆಯಾಗಿದ್ದಾನೆ.
ಈ ಸಂಬಂಧ ಶ್ರೀಕಿ ಹಾಗೂ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಿದ್ದಾರೆ.