ಬೆಂಗಳೂರು,ನ.06 (DaijiworldNews/HR): ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 224 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2989713 ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಇಂದು 224 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2989713 ಏರಿಕೆಯಾಗಿದೆ. ಇಂದು 317 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು ರಾಜ್ಯದಲ್ಲಿ ಸದ್ಯ 8,090 ಸಕ್ರಿಯ ಪ್ರಕರಣಗಳಿದ್ದು, ಇಂದು 5 ಮಂದಿ ಸಾವನ್ನಪ್ಪಿದ್ದು, ಇಲ್ಲಿಯವರೆಗೂ ಮೃತಪಟ್ಟವರ ಒಟ್ಟು ಸಂಖ್ಯೆ 38,107 ಏರಿಕೆಯಾಗಿದೆ.