ರಾಮನಗರ, ನ.07 (DaijiworldNews/PY): "ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಅವರು ಬಿಜೆಪಿಯಲ್ಲೇ ಮುಂದುವರಿಯಲಿದ್ದಾರೆ" ಎಂದು ಸಚಿವ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಬಿಜೆಪಿ ಪಕ್ಷ ಬಿಡುವ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ.
"ಚನ್ನಪಟ್ಟಣದಿಂದ ಸಿ ಪಿ ಯೋಗೇಶ್ವರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ದೊಡ್ಡದೇನೂ ಅಲ್ಲ. ಅವರು ಸದ್ಯ ರಾಜ್ಯಾದ್ಯಂತ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಯೋಗೇಶ್ವರ್ ಅವರಿಗೆ ಪಕ್ಷದಲ್ಲಿ ಯಾವೆಲ್ಲಾ ಸ್ಥಾನಮಾನ ಗೌರವ ಸಿಗಬೇಕೋ ಅದು ಸಿಗುತ್ತದೆ" ಎಂದು ಹೇಳಿದ್ದಾರೆ.