ಹೊಸದುರ್ಗ,ನ.7 (DaijiworldNews/HR): ರಾಜ್ಯದ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕೆ ಸಿರಿಧಾನ್ಯವನ್ನು ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, 2023 ಕ್ಕೆ ಅಂತರರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮೇಳ ಏರ್ಪಡಿಸಲಾಗುವುದು. ಮಧ್ಯಾಹ್ನದ ಬಿಸಿಯೂಟಕ್ಕೆ ಶಾಲಾ ಮಕ್ಕಳಿಗೆ ಸಿರಿಧಾನ್ಯ ಕೊಡಲಾಗುವುದು ಎಂದು ಹೇಳಿದ್ದಾರೆ.
ಇನ್ನು ಸಾವಯುವ ಕೃಷಿ ತುಂಬಾ ಅವಶ್ಯಕವಾಗಿದ್ದು, ಬೆಳೆಗಳಿಗೆ ವೈಜ್ಞಾನಿಕ ಬೆಲೆ ಬರಬೇಕು. ಇದಕ್ಕಾಗಿ ಸರ್ಕಾರ ಉತ್ಪಾದಕ ಸಂಸ್ಥೆ ಸ್ಥಾಪಿಸುವ ಮೂಲಕ ಕೃಷಿಕರಿಗೆ ಬೆಂಬಲ ನೀಡುತ್ತಿದೆ" ಎಂದರು.
ಪ್ರಧಾನಿ ಮೋದಿಯವರು ಆತ್ಮ ನಿರ್ಭರ ಯೋಜನೆಯಡಿ ಈ ಯೋಜನೆಗೆ 10 ಕೋಟಿ ರೂ. ಮೀಸಲಿಟ್ಟಿದ್ದಾರೆ ಎಂದು ಹೇಳಿದ್ದಾರೆ.