ನವದೆಹಲಿ, ನ.07 (DaijiworldNews/PY): ಪ್ರಧಾನಿ ನರೇಂದ್ರ ಮೋದಿ ಅವರು ಈ ಬಾರಿಯೂ ವಿಶ್ವ ಅಗ್ರ ನಾಯಕನ ಸ್ಥಾನ ಉಳಿಸಿಕೊಂಡಿದ್ದಾರೆ.
ಅಮೇರಿಕಾದ ಸಂಶೋಧನಾ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ಶನಿವಾರ ಬಿಡುಗಡೆ ಮಾಡಿದ ಗ್ಲೋಬಲ್ ಲೀಡರ್ ಅಪ್ರೂವಲ್ ಟ್ರ್ಯಾಕರ್ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಅತಿ ಹೆಚ್ಚು ಶೇಕಡಾವಾರು ರೇಟಿಂಗ್ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
ಸಂಸ್ಥೆಯು ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ, ಪ್ರಧಾನಿ ಮೋದಿ ಅವರು ಶೇ.70 ರೇಟಿಂಗ್ನೊಂದಿಗೆ ವಿಶ್ವದ ಅಗ್ರ ನಾಯಕನ ಸ್ಥಾನ ಪಡೆದುಕೊಂಡಿದ್ದು, ಅಮೇರಿಕಾ ಅಧ್ಯಕ್ಷ ಜೋ ಬಿಡೆನ್ ಹಾಗೂ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರನ್ನು ಹಿಂದಿಕ್ಕಿದ್ದಾರೆ.
ಮೆಕ್ಸಿಕೊ ಅಧ್ಯಕ್ಷ ಲೊಪೇಝ್ ಒಬ್ರಾಡರ್ ಶೇ.66, ಇಟಲಿ ಪ್ರಧಾನಿ ಮಾರಿಯೋ ಡ್ರಾಘಿ ಶೇ. 58 ರೇಟಿಂಗ್ ಪಡೆದಿದ್ದಾರೆ. ಜರ್ಮನಿಯ ಚಾನ್ಸಲರ್ ಏಂಜೆಲಾ ಮರ್ಕೆಲ್ ಶೇ. 54, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಶೇ.47, ಅಮೇರಿಕ ಅಧ್ಯಕ್ಷ ಜೋ ಬಿಡೆನ್ ಶೇ.44 ಹಾಗೂ ಕೆನಡಾ ಪ್ರಧಾನಿ ಜಸ್ಟಿನ್ ಟ್ರೂಡೊ ಶೇ.43 ರೇಟಿಂಗ್ ಪಡೆದಿದ್ದಾರೆ.