ಬೆಂಗಳೂರು, ನ.07 (DaijiworldNews/PY): "ನವೆಂಬರ್ 19 ರಿಂದ 21ರವರೆಗೆ ಬಿಜೆಪಿಯ ಜನಸ್ವರಾಜ್ ಸಮಾವೇಶ ನಡೆಯಲಿದೆ" ಎಂದು ಎಂಎಲ್ಸಿ ಎನ್ ರವಿಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಜನಸ್ವರಾಜ್ ಸಮಾವೇಶ ನವೆಂಬರ್ 19 ರಿಂದ 21 ರವರೆಗೆ ನಡೆಯಲಿದ್ದು, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನವೆಂಬರ್ 19ರಿಂದ 21 ರವರೆಗೆ ಮೊದಲ ಹಂತದ ಯಾತ್ರೆ ನಡೆಯಲಿದೆ. ಬಾಗಲಕೋಟೆ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಗದಗ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ವಿಭಾಗದಲ್ಲಿ ಯಾತ್ರೆ ನಡೆಯಲಿದೆ" ಎಂದು ಹೇಳಿದ್ದಾರೆ.
"ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದ ತಂಡ ಯಾದಗಿರಿ, ಕೊಪ್ಪಳ, ರಾಯಚೂರು, ಬೀದರ್, ಕಲಬುರಗಿ ಹಾಗೂ ಬಳ್ಳಾರಿಯಲ್ಲಿ ನಡೆಯಲಿದೆ" ಎಂದಿದ್ದಾರೆ.
"ಉಡುಪಿ, ಮಂಗಳೂರು, ಕೊಡಗು, ಮಂಡ್ಯ, ಶಿವಮೊಗ್ಗ, ಚಿಕ್ಕಮಗಳೂರು, ಚಾಮರಾಜನಗರ ಹಾಗೂ ಹಾಸನದಲ್ಲಿ ಸಚಿವ ಕೆ ಎಸ್ ಈಶ್ವರಪ್ಪ ಅವರ ನೇತೃತ್ವದ ತಂಡ ಯಾತ್ರೆ ನಡೆಸಲಿದೆ" ಎಂದು ಹೇಳಿದ್ದಾರೆ.
"ಇನ್ನು ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದ ತಂಡ ತುಮಕೂರು, ಚಿತ್ರದುರ್ಗ, ರಾಮನಗರ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಜನಸ್ವರಾಜ್ ಸಮಾವೇಶ ನಡೆಯಲಿದೆ" ಎಂದು ತಿಳಿಸಿದ್ದಾರೆ.