ಚಂಡೀಗಢ, ನ.07 (DaijiworldNews/PY): ಕೇಂದ್ರ ಸರ್ಕಾರವು ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಕೆಲವೇ ದಿನಗಳ ಬಳಿಕ ಪಂಜಾಬ್ ಸರ್ಕಾರ ತೈಲ ಬೆಲೆಯನ್ನು ಇಳಿಸಿದೆ.
ಪಂಜಾಬ್ನಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಭಾನುವಾರ ಪೆಟ್ರೋಲ್ ಹಾಗೂ ಡೀಸೆಲ್ಗಳ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ್ದು, ಇದರಿಂದಾಗಿ ರಾಜ್ಯದಲ್ಲಿ ಲೀಟರ್ಗೆ 10 ರೂ. ಹಾಗೂ ಲೀಟರ್ಗೆ 5 ರೂ ಇಳಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದ ದರ ಪರಿಷ್ಕರಣೆಯಾಗಲಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪಂಜಾಬ್ ಸಿಎಂ ಚರಣ್ಜಿತ್ ಸಿಂಗ್ ಚನ್ನಿ, "ಇಂದು ಮಧ್ಯರಾತ್ರಿಯಿಂದ ಪೆಟ್ರೋಲ್ ದರ ಲೀಟರ್ಗೆ 10 ರೂ. ಹಾಗೂ ಡೀಸೆಲ್ ದರ ಲೀಟರ್ಗೆ 5 ರೂ. ಕಡಿಮೆ ಮಾಡುತ್ತಿದ್ದೇವೆ" ಎಂದು ತಿಳಿಸಿದ್ದಾರೆ.
ದೆಹಲಿ, ಕೇರಳ, ಪಂಜಾಬ್, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ತೈಲ ದರ ಇಳಿಸದ ಸರ್ಕಾರದ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಎಚ್ಚೆತ್ತುಕೊಂಡ ಪಂಜಾಬ್ ಸರ್ಕಾರ ಕೊನೆಗೂ ಪೆಟ್ರೋಲ್ ಹಾಗೂ ಡೀಸೆಲ್ಗಳ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಲು ನಿರ್ಧರಿಸಿದ್ದಾರೆ.