ಬೆಂಗಳೂರು, ನ.7 (DaijiworldNews/HR): ಕರ್ನಾಟಕದ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ನ.7ರಿಂದ 9ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಾಂದರ್ಭಿಕ ಚಿತ್ರ
ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗುವುದರಿಂದ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.
ಇನ್ನು ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನ.7ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ.