ಫರೂಖಾಬಾದ್,ನ.7 (DaijiworldNews/HR): ಉತ್ತರ ಪ್ರದೇಶದ ಜಿಲ್ಲಾ ಕಾರಾಗೃಹದಲ್ಲಿ ಕೈದಿಯೊಬ್ಬನ ಸಾವಿನಿಂದ ಆಕ್ರೋಶಗೊಂಡ ಸಹ ಕೈದಿಗಳು ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿ, ಜೈಲಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಜೈಲಿಗೆ ಬೆಂಕಿ ಹಚ್ಚಿರುವ ಹಿನ್ನಲೆಯಲ್ಲಿ ಸುಮಾರು 30 ಪೊಲೀಸರು ಮತ್ತು ಆರು ಕೈದಿಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಕೈದಿಯೊಬ್ಬ ಡೆಂಗಿ ಕಾಯಿಲೆಯಿಂದ ಸೈಫಾಯಿ ವೈದ್ಯಕೀಯ ಕಾಲೇಜಿನಲ್ಲಿ ಮೃತಪಟ್ಟಿದ್ದು, ಈ ಸುದ್ದಿ ಹೊರಬೀಳುತ್ತಿದ್ದಂತೆ ಕಾರಾಗೃಹದಲ್ಲಿ ಕೈದಿಗಳು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಬೆಂಕಿ ಹಚ್ಚಿದ್ದಾರೆ ಎಂದು ಜೈಲಿನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ತಕ್ಷಣ ಅಗ್ನಿಶಾಮಕ ದಳವನ್ನು ಕರೆಸಿ, ಬೆಂಕಿ ನಂದಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.