ಬೆಂಗಳೂರು, ನ.08 (DaijiworldNews/PY): ನಟ ಪುನೀತ್ ರಾಜ್ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಬಗ್ಗೆ ಅವರ ಕುಟುಂಬದವರೊಂದಿಗೆ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಪುನೀತ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವ ಬಗ್ಗೆ ಅವರ ಕುಟುಂಬದೊಂದಿಗೆ ಸದ್ಯದಲ್ಲೇ ಚರ್ಚಿಸುತ್ತೇನೆ. ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂದು ಹೆಚ್ಚಿನ ಮಂದಿಯ ಒತ್ತಾಸೆಯಾಗಿದೆ. ಈ ಬಗ್ಗೆ ಸೂಕ್ತ ಸಮಯದಲ್ಲಿ ಚರ್ಚಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು" ಎಂದಿದ್ದಾರೆ.
"ಪದ್ಮಶ್ರೀ ಪ್ರಶಸ್ತಿ ನೀಡಬೇಕಾದರೆ ಕೆಲವೊಂದು ರೀತಿ ನೀತಿಗಳನ್ನು ಪಾಲಿಸಬೇಕಾಗುತ್ತದೆ. ಅವೆಲ್ಲವನ್ನು ಪಾಲಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕಾಗುತ್ತದೆ" ಎಂದು ಹೇಳಿದ್ದಾರೆ.
ಇಂದು ಪುನೀತ್ ರಾಜ್ಕುಮಾರ್ ಅವರ 11ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ನನ್ನನ್ನು ಈಆಗಮಿಸಬೇಕೆಂದು ಅವರ ಕುಟುಂಬದವರು ಮನವಿ ಮಾಡಿದ್ದಾರೆ. ವಿವಿಧಾನ ಕಾರ್ಯಕ್ರಮಗಳನ್ನು ಅತ್ಯಂತ ಯಶಸ್ವಿಯಾಗಿ ನಿಭಾಯಿಸಿದ್ದಕ್ಕಾಗಿ ಅವರು ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದಿದ್ದಾರೆ.
ಇಂದು ಪುನೀತ್ ರಾಜ್ಕುಮಾರ್ ಅವರ 11ನೇ ದಿನದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆದಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾಗಿಯಾಗಿದ್ದಾರೆ.