ತಿರುವನಂತಪುರಂ, ನ.08 (DaijiworldNews/HR): ಒಂದೇ ಕುಟುಂಬದ ಮೂವರು ಅನೇಕ ಗಾಯದೊಂದಿಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಘೋರ ಕೃತ್ಯ ಎಸಗಿದ್ದಾನೆ ಎನ್ನಲಾದ ವ್ಯಕ್ತಿ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೊಟ್ಟಾರಕರ ಬಳಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತಪಟ್ಟವರನ್ನು ರಾಜೇಂದ್ರ, ಪತ್ನಿ ಅನಿತಾ, ಮಕ್ಕಳಾದ ಆದಿತ್ಯ ಮತ್ತು ಅಮೃತಾ ಎಂದು ಗುರುತಿಸಲಾಗಿದೆ.
ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮನೆಯನ್ನು ತಪಾಸಣೆ ನಡೆಸಿದ್ದಾರೆ.
ಇನ್ನು ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಆಟೋ ಚಾಲಕನಾಗಿದ್ದ ನೆರೆಮನೆಯ ರಾಜೇಂದ್ರನ್, "ಕುಟುಂಬದಲ್ಲಿ ಬೇರೆ ಯಾವುದೇ ಸಮಸ್ಯೆಯಿದ್ದ ಬಗ್ಗೆ ಮಾಹಿತಿಯಿಲ್ಲ" ಎಂದಿದ್ದಾರೆ.